ನವದೆಹಲಿ : 34 ವರ್ಷಗಳ ಹಿಂದೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರು 10 ತಿಂಗಳ ನಂತರ ಇಂದು ಪಟಿಯಾಲ ಜೈಲಿನಿಂದ ಬಿಡುಗಡೆಯಾಗಿದ್ದಾರೆ.34 ವರ್ಷಗಳ ಹಿಂದೆ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, 59 ವರ್ಷದ ನವಜೋತ್ ಸಿಂಗ್ ಸಿಧು ಒಂದು ವರ್ಷದ ಜೈಲುಶಿಕ್ಷೆಗೆ ಗುರಿಯಾಗಿದ್ದರು. ಇದೀಗ 10 ತಿಂಗಳ ಬಳಿಕ ಪಟಿಯಾಲ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
1988ರಲ್ಲಿ ವರ್ಷಗಳ ಹಿಂದೆ ನಡೆದ ರಸ್ತೆ ಅಪಘಾತದ ಸಂದರ್ಭದಲ್ಲಿ, ಕೋಪದ ಭರದಲ್ಲಿ ಹಿರಿಯ ನಾಗರಿಕರೊಬ್ಬರ ಮೇಲೆ ತೀವ್ರ ಹಲ್ಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆ ವ್ಯಕ್ತಿ, ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಬಳಿಕ ಪೊಲೀಸರು ನವಜೋತ್ ಸಿಧು ಮತ್ತು ಅವರ ಸ್ನೇಹಿತರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.