2024 ರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.
ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ ಅಂಚೆ ಮತಪತ್ರಗಳ ಎಣಿಕೆಯಲ್ಲಿ ಬಹುತೇಕ ದೇಶದೆಲ್ಲೆಡೆ ಮುಂಚೂಣಿಯಲ್ಲಿದೆ.
ಬಿಜೆಪಿ ಒಂದೇ 190 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್ಡಿಎ 220 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್ಡಿಎ ಮುನ್ನಡೆಯಲ್ಲಿದೆ. ಕಾಂಗ್ರೆಸ್ 35 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು I.N.D.I.A ಮೈತ್ರಿಕೂಟ 115 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ದಕ್ಷಿಣ ಕನ್ನಡ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 188 ಮತ ಗಳಿಸಿ ಮುನ್ನಡೆ ಗಳಿಸಿದ್ದು, ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 96 ಮತ ಪಡೆದಿದ್ದಾರೆ.
ಆರಂಭಿಕ ಮತ ಎಣಿಕೆಯ ಪ್ರಕಾರ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದು, ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ
ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಅಂಚೆ ಮತ ಎಣಿಕೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿಗೆ 78 ಮತ, ಜಯಪ್ರಕಾಶ್ ಹೆಗ್ಡೆ 45 ಮತ ಲಭಿಸಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು 33 ಮತಗಳಿಂದ ಮುನ್ನಡೆಯಲ್ಲಿದ್ದಾರೆ