ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಗುರುವಾರ ತಡರಾತ್ರಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ಕೊನೆಯುಸಿರೆಳೆದರು. ಮನಮೋಹನ್ ಸಿಂಗ್ ಅವರನ್ನು ಭಾರತದಲ್ಲಿ ಆರ್ಥಿಕ ಸುಧಾರಣೆಗಳ ಪಿತಾಮಹ ಎಂದೇ ಕರೆಯಲಾಗುತ್ತದೆ.
ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಎಐಸಿಸಿ ಕಚೇರಿಯಿಂದ ಆರಂಭಗೊಂಡಿದೆ. ಇದನ್ನು ಮುನ್ನ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ಮ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ.