ಬೆಂಗಳೂರು:- ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಮುನ್ನೆಚ್ಚರಿಕೆಗಾಗಿ ಬೆಂಗಳೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆಂಗಳೂರಲ್ಲಿ ಪ್ರತಿ ಬಾರಿ ಹೊಸ ಸಂಭ್ರ,ಮದಲ್ಲಿದ್ದ ಸಿಟಿ ಜನರು ನಗರದ ಬ್ರಿಗೇಡ್ ರೋಡ್, ಎಂಜಿ ರಸ್ತೆಯಲ್ಲಿ ಸೇರಿಕೊಂಡು ಎಂಜಾಯ್ ಮಾಡುತ್ತಾರೆ ಈ ನಡುವೆ ಗಲಭೆಗಳು ನಡೆಯುತ್ತಲೇ ಇರುತ್ತದೆ.
ಈ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಗೈಡ್ ಲೈನ್ಸ್ ನಲ್ಲಿ ಏನಿದೆ?*
-ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು
-ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ
-ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್
-ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
-ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
-ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
-ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
-ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ
-ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ
-ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ
-ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ
-ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ
ಬಿಬಿಎಂಪಿ ಮಾರ್ಷಲ್ಗಳಿಂದಲು ಭದ್ರತೆ
ಪಾರ್ಟಿ ಮುಗಿದ ಬಳಿಕ ಸ್ವಚ್ಚತೆಗೆ ಪಾಲಿಕೆ ಆದ್ಯತೆ