ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಮಧ್ಯೆ ನಿಫಾ ವೈರಸ್ ಆತಂಕ ಶುರುವಾಗಿದೆ. ರಾಜ್ಯಕ್ಕೆ ಕಳೆದೊಂದು ತಿಂಗಳಿನಿಂದ ವೈರಸ್ಗಳ ಹಾವಳಿ ಶುರುವಾಗಿದೆ. ಒಂದು ಕಡೆ ಡೆಂಗ್ಯೂ ಜ್ವರ ಬಿಟ್ಟು ಬಿಡದೆ ಜನರನ್ನ ಕಾಡುತ್ತಿದೆ.
ಈ ನಡುವೆ ನಿಫಾ ವೈರಸ್ ಆತಂಕ ಶುರುವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್ ಆತಂಕ ಎದುರಾಗಿದೆ. ಈಗಾಗಲೇ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ಗೆ 14 ವರ್ಷದ ಬಾಲಕ ಮೃತಪಟ್ಟ ಬೆನ್ನಲ್ಲೇ ರಾಜ್ಯದ ಕೇರಳದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಬಾವಲಿ ಮತ್ತು ಹಂದಿಗಳ ಮೈಯ ದ್ರವದ ಮೂಲಕ ಮನುಷ್ಯರಿಗೆ ಹರಡುವ ವೈರಸ್ ಇದಾಗಿದೆ. ಇದು ಮನುಷ್ಯರಿಂದ ಮನುಷ್ಯರಿಗೂ ಹರಡುತ್ತದೆ. ಕೋವಿಡ್ ಸೋಂಕಿನಂತೆ ಈ ನಿಫಾ ವೈರಸ್ ಸೋಂಕು ಗುಣಪಡಿಸಲು ಯಾವುದೇ ಚಿಕಿತ್ಸೆ ಇಲ್ಲ. ಮರಣ ಪ್ರಮಾಣ ಶೇ 70ರಷ್ಟಿದೆ. ಹೀಗಾಗಿ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲೂ ಕೂಡ ಹೈ ಅಲರ್ಟ್ ಘೋಷಿಸಲಾಗಿದೆ
ಇನ್ನೂ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಡೆಂಘೀ ಪ್ರಕರಣಗಳು ಮುನ್ನುಗ್ಗುತ್ತಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 409 ಪಾಸಿಟಿವ್ ಪ್ರಕರಣ ದಾಖಲಾಗಿದ್ದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 409ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ 181 ಡೆಂಗ್ಯೂ ಪಾಸಿಟಿವ್ ಕಂಡುಬಂದಿರವುದು ಆತಂಕ ಹೆಚ್ಚಿಸಿದೆ.