ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆಯಿಂದಲೆ ಟೆಂಪಲ್ ರನ್ ಮಾಡಿದ ನಿಖಿಲ್ ಕುಟುಂಬದ ಜೊತೆ ಸೇರಿ ಕೆಂಗಲ್ ಹನುಮಂತರಾಯ ದೇವರ ದರ್ಶನ ಮಾಡಿದರು.
ನಾಮಪತ್ರ ಸಲ್ಲಿಕೆಗು ಮುನ್ನ ಶಕ್ತಿ ಪ್ರದರ್ಶನ ಮಾಡಿರುವ ದೋಸ್ತಿಗಳು ತೆರೆದ ವಾಹನದಲ್ಲಿ ಸುಮಾರು 1.50 ಕಿ.ಮೀ ಮೆರವಣಿಗೆ ಮಾಡಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
ರೋಡ್ಶೋನಲ್ಲಿ ಕುಮಾರ್ಸ್ವಾಮಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಾದ ಆರ್.ಅಶೋಕ್, ಬಿ,ವೈ ರಾಘವೇಂದ್ರ, ಅಶ್ವತ್ ನಾರಯಣ್ ಸೇರಿದಂತೆ ಬಿಜೆಪಿ ಪ್ರಮುಖರು ಭಾಗವಹಿಸಿದರು. ಇವರೆಲ್ಲರ ಜೊತೆ ಮೈಸೂರು ಸಂಸದ ಯದುವೀರ್ ಒಡೆಯರ್ ಕೂಡ ಈ ಮೆರವಣಿಗೆಯಲ್ಲಿ ಭಾಗವಹಿಸಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ನೀಡಿದರು.ಅಧಿಕೃತವಾಗಿ ಮಧ್ಯಾಹ್ನ 1:30 ಕ್ಕೆ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಮಯದಲ್ಲಿ ನಿಖಿಲ್ ಪತ್ನಿರೇವತಿ , ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ನಿಖಿಲ್ ಕುಮಾರಸ್ವಾಮಿಗೆ ಸಾಥ್ ನೀಡಿದರು.
ನಿಖಿಲ್ ಕುಮಾರಸ್ವಾಮಿ ಅವರು 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ವಿರುದ್ಧ ಸೋಲು ಅನುಭವಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.