ನವದೆಹಲಿ: 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ (Muslim Nations) ಮೇಲೆ 26,000 ಬಾಂಬ್ಗಳ ದಾಳಿ (Bomb Attack) ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿಯನ್ನು (Narendra Modi) ಕೇಳಬೇಕಿತ್ತು ಎಂಬ ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ (Barack Obama) ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಒಬಾಮ ಅವರು ಅಧಿಕಾರದಲ್ಲಿದ್ದಾಗಲೇ 6 ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆದಿತ್ತು. ಆದ್ರೆ ನಮ್ಮ ಸರ್ಕಾರ ʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ಯುಎಸ್ನಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.