ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದಂದು ಪ್ರಾಣಿವಧೆ ನಿರ್ಬಂಧಿಸಿ ಆದೇಶಿಸಲಾಗಿದೆ.
ಪ್ರತಿ ಬಕ್ರೀದ್ ಹಬ್ಬ ಆಚರಣೆ ಅಥವಾ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ ಮಾಡಿ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ. ಕೆ.ಪಿ. ರವಿಕುಮಾರ್ ಆದೇಶಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಸ್ತೆ, ಪಾದಚಾರಿ ಮಾರ್ಗ, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು ಅಥವಾ ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.