ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ” ಈ ಹೇಳಿಕೆಯನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು. ಇದು ಬ್ಲಾಕ್ ಮೇಲ್ ರಾಜರಾರಣ ಎಂಬುದರಲ್ಲಿ ಸಂಶಯವಿಲ್ಲ. ಅವರ ಮಾತಿಗೆ ಪ್ರಾಶಸ್ತ್ಯ ಕೊಡುವುದು ಅನಾವಶ್ಯಕ ” ಎಂದರು.
” ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್ ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು. ಆ ಗಿಫ್ಟ್ ಕಾರ್ಡ್ ಕೊಟ್ಟು ಜನರನ್ನು ವಂಚಿಸಿದ್ದಾರೆ. ಈ ಗ್ಯಾರಂಟಿ ಯೋಜನೆಗಳೂ ಅದೇ ರೀತಿ ” ಎಂದು ನೇರವಾಗಿ ಆರೋಪ ಮಾಡಿದರು