ಬೆಳಗಾವಿ: ಸಿದ್ದರಾಮಯ್ಯ ಸಾಹೇಬ್ರನ್ನು ಇಳಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಾಹೇಬ್ರನ್ನು ಇಳಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ನ್ಯಾಯಾಲಯ ಎನ್ನುವುದು ಒಂದು ವ್ಯವಸ್ಥೆ.
ಅದು ತಾನಾಗಿಯೇ ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎನ್ನುವುದು ನಮ್ಮೆಲ್ಲರ ಆಸೆ. ಹಾಗಾಗಿ, ಅವರೇ ಮುಂದುವರಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕೇಸ್ಗಳು ಕೋರ್ಟ್ನಲ್ಲಿವೆ. ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣಿಸುತ್ತಾರೆ ಎಂದು ಪ್ರಶ್ನಿಸಿದ ಮಧು ಬಂಗಾರಪ್ಪ, ಇನ್ನು ನಮ್ಮ ತಂದೆಯವರು ಮುಖ್ಯಮಂತ್ರಿ ಆಗಿದ್ದಾಗ ಬೇಕಾದಷ್ಟು ಕೇಸ್ಗಳನ್ನು ನೋಡಿದ್ದೇವೆ. ಇದರ ಬಗ್ಗೆ ಈಗ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು