ಬೆಂಗಳೂರು: ಡಿ.ಕೆ ಶಿವಕುಮಾರ್ ಗೆ ಧಮ್, ತಾಕತ್ ಇದ್ರೆ ಮೀಸಲಾತಿ ತೆಗೆಯಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲ್ ಹಾಕಿದ್ದಾರೆ. ಅಧಿಕಾರಕ್ಕೆ ಬಂದ್ರೆ ಮುಸ್ಲಿಂರ ಮೀಸಲಾತಿ ಕೋಟಾ ಮರುಸ್ಥಾಪನೆ ಮಾಡುತ್ತೇವೆ’ ಎಂಬ ಡಿಕೆಶಿ ಹೇಳಿಕೆಗೆ ಯತ್ನಾಳ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿ ತಿರುಗೇಟು ನೀಡಿದ್ದಾರೆ. ಲಿಂಗಾಯತರು, ಒಕ್ಕಲಿಗ ಸಮುದಾಯದ ದೊಡ್ಡ ಶಕ್ತಿ ಇದೆ, ಮೀಸಲಾತಿ ತೆಗೆದರೆ ಸರ್ವನಾಶ ಆಗುತ್ತಾರೆ. ಅವರ ಮುಸ್ಲಿಂ ಸೋದದರಿಗಾಗಿ ಈ ಹೇಳಿಕೆ ನೀಡಿದ್ದಾರೆ. ಈ ರೀತಿ ಮಾಡಿದ್ರೆ ಡಿಕೆಶಿ ಮೆಕ್ಕಾ ಮದೀನಾಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈ ಬಾರಿ ಕೂಡ ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಆಪರೇಷನ್ ಕಮಲ ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಪಂಚಮಸಾಲಿಗೆ 2 ಡಿ ಮೀಸಲಾತಿ ಘೋಷಣೆ ಮಾಡಿ ಸಿಎಂ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಮೋದಿ , ಅಮಿತ್ ಶಾ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ 75 ವರ್ಷ ಆದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ, ಒಂದೇ ಕುಟುಂಬಕ್ಕೆ ಟಿಕೆಟ್ ಇಲ್ಲ. ಮೋದಿ, ಅಮಿತ್ ಶಾ ಒಳ್ಳೆಯ ನಿರ್ಣಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸ್ತೇನೆ. ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡಲ್ಲ. ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ. ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ಯತ್ನಾಳ್ ಹೇಳಿದ್ದಾರೆ.