ಬೆಂಗಳೂರು ;– ನಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮಇಲಾಖೆಯಲ್ಲಿ ಟ್ರಾನ್ಸಫರ್ ದಂಧೆ ನಡೆದಿಲ್ಲ, ನಡೆಯುವುದಿಲ್ಲ. ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಎಲ್ಲರ ಸಮ್ಮುಖದಲ್ಲಿ ನಾನು ಮಂತ್ರಿಯಾಗಿ ಚುರುಕು ಮುಟ್ಟಿಸುವಂತ ಕೆಲಸ ಮಾಡುತ್ತಿದ್ದೇನೆ ಎಂದರು.
ವಿವಿಧ ಇಲಾಖೆಗೆ ಸಂಬಂಧಿಸಿದ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿ.ಆರ್. ಪಾಟೀಲ್ ಪತ್ರ ಬರೆದಿದ್ದಾರೆ ಎನ್ನಲಾದ ಬಗ್ಗೆ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಆ ಪತ್ರವನ್ನು ಬಿಜೆಪಿಯವರು ತಿರುಚಿ ಕಟ್ ಅಂಡ್ ಪೇಸ್ಟ್ ಮಾಡಿ ಆಯಡ್ ಮಾಡಿದ್ದಾರೆ ಎಂದು ಕಾನೂನು ಕ್ರಮ ತೆಗೆದುಕೊಳ್ಳಲು ದೂರು ಕೊಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಸಭೆ ಕೂಡಾ ಕರೆಯಲಾಗಿದೆ. ನಮ್ಮ ಸರ್ಕಾರ 2,000 ಕೋಟಿ ರೂ. ಜೊತೆಗೆ 3,000 ಕೋಟಿ ರೂ. ಅನುದಾನ ಕೊಟ್ಟಿದೆ. ಒಟ್ಟು 5,000 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು. ಬಳಿಕ ಉಡುಪಿ ಕಾಲೇಜು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ರೀತಿಯಲ್ಲಿ ಏನು ಕ್ರಮ ಆಗಬೇಕೋ ಆಗುತ್ತೆ. ಇಂತಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.