ಟಿ20 ವಿಶ್ವಕಪ್ ಬಳಿಕ ದ್ರಾವಿಡ್ ಭಾರತ ತಂಡದ ಕೋಚಿಂಗ್ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು. ಅದಾಗಲೇ ದ್ರಾವಿಡ್ ಐಪಿಎಲ್ ಕೋಚಿಂಗ್ ನಡೆಸುತ್ತಾರೆ ಎನ್ನಲಾಗಿತ್ತು. ಜತೆಗೆ ಕನ್ನಡಿಗರ ನೆಚ್ಚಿನ ತಂಡವಾದ ಆರ್ಸಿಬಿ ಪರ ಕೋಚಿಂಗ್ ಮಾಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಇದೀಗ ದ್ರಾವಿಡ್ ಆರ್ಸಿಬಿ ಬದಲಾಗಿ ರಾಜಸ್ಥಾನ್ ಪರ ಕೋಚಿಂಗ್ ನಡೆಸುವುದು ಖಚಿತವಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಮಾಹಿತಿ ಇದುವರೆಗೂ ಪ್ರಕಟಗೊಂಡಿಲ್ಲ.
ರಾಜಸ್ಥಾನ್ ರಾಯಲ್ಸ್ ಪರ ನಾಯಕರಾಗಿ ದ್ರಾವಿಡ್ ಒಮ್ಮೆ ತಂಡವನ್ನು ಪ್ಲೇ ಆಪ್ಗೆ ಕೊಂಡೊಯ್ದಿದ್ದರು. ಚಾಂಪಿಯನ್ಸ್ ಲೀಗ್ನಲ್ಲಿ ತಂಡ ಫೈನಲ್ಗೇರಿತ್ತು. ರಾಜಸ್ಥಾನ್ ತಂಡದ ಪರ 40 ಪಂದ್ಯಗಳಲ್ಲಿ ನಾಯಕರಾಗಿದ್ದ ದ್ರಾವಿಡ್ 23 ಗೆಲುವು ಕಂಡಿದ್ದಾರೆ. ಎರಡು ಸೀಸನ್ಗಳಲ್ಲಿ ರಾಜಸ್ಥಾನ್ ತಂಡದ ಕೋಚ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್ ಕೋಚಿಂಗ್ನಿಂದ ದೂರ ಉಳಿದಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎಲ್ಲ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ಅವರು ಐಪಿಎಲ್ ಕೋಚಿಂಗ್ ಕಡೆ ಗಮನಹರಿಸಿದ್ದಾರೆ.
ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರು ರಾಹುಲ್ ಈ ಬಾರಿ ಲಕ್ನೋ ತೊರೆಯುವುದು ಖಚಿತವಾಗಿದೆ. ಮೂಲ್ಳ ಪ್ರಕಾರ ಅವರು ಆರ್ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು.
ರಾಹುಲ್ ಆರ್ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ಕೇಳಿದ್ದೇ ತಡ ಕನ್ನಡಿಗರು ಮತ್ತು ಆರ್ಸಿಬಿ ಅಭಿಮಾನಿಗಳು ಆರ್ಸಿಬಿ ಜೆರ್ಸಿಯಲ್ಲಿ ರಾಹುಲ್ ಅವರ ಫೋಟೊ ಎಡಿಟ್ ಮಾಡಿ ತವರಿಗೆ ಸ್ವಾಗತ ಎನ್ನುವ ಪೋಸ್ಟರ್ ಶೇರ್ ಮಾಡಲಾರಂಭಿಸಿದ್ದಾರೆ. ಈ ಪೋಸ್ಟರ್ಗಳು ವೈರಲ್ ಆಗುತ್ತಿವೆ.