ಬೆಂಗಳೂರು: ರಾಷ್ಟ್ರದ ಅಭಿವೃದ್ಧಿಗೆ ನರೇಂದ್ರ ಮೋದಿ ಬೇಕು ಎಂದು ಮಾಜಿ ವಿ.ಸೋಮಣ್ಣ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಸುಳ್ಳು ವಿಚಾರ, ಚುನಾವಣೆ ನಿಲ್ಲೋದು ಬಿಡೋದು ಅನ್ನುವುದಕ್ಕಿಂತ ಹೆಚ್ಚಾಗಿ ನನಗೆ ಅದರ ಅವಶ್ಯಕತೆಯಿಲ್ಲ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ದೇಶದ ಜನ ಅಲ್ಲ ಇಡೀ ಜಗತ್ತಿನ ಜನ ಇವತ್ತಿನ ಸಂದರ್ಭ, ಸನ್ನಿವೇಶಕ್ಕೆ ಮೋದಿಯವರ ಅವಶ್ಯಕತೆ ಬಹಳಷ್ಟಿದೆ ಎಂದು ಹೇಳುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ದೇಶದ ಪರಿಸ್ಥಿತಿ ಬೇರೆಯಾಗುತ್ತಿತ್ತು ಹಾಗಾಗಿ ದೇಶದ ಬಗ್ಗೆ ಚಿಂತನೆ ಮಾಡೋಣ ಎಂದರು.
ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವುದನ್ನು ಕನಸಿನಲ್ಲಿಯೂ ಕಂಡಿಲ್ಲ. ಯೋಚನೆಯೂ ಮಾಡಿಲ್ಲ. ಚುನಾವಣೆ ನಿಲ್ಲೋದು ಬಿಡೋದು ಅನ್ನುವುದಕ್ಕಿಂತ ಹೆಚ್ಚಾಗಿ ಅದರ ಅವಶ್ಯಕತೆಯಿಲ್ಲ. ವೈಯಕ್ತಿಯ ರಾಜಕೀಯ ಇದೀಗ ಮಾತನಾಡಲಾರೆ, ಸೂಕ್ತ ಸಮಯದಲ್ಲಿ ಉತ್ತರಿಸುತ್ತೇನೆ ಎಂದರು.