ಬೆಂಗಳೂರು:- ವಾಹನ ಸವಾರರು ಇದು ನೀವು ನೋಡಲೇಬೇಕಾದ ಸ್ಟೋರಿ. ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ಎರಡು ದಿನ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ.
ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಂದು ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಸೆಪ್ಟೆಂಬರ್ 8 ರವಿರಾದಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮದ ನಡೆಯುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ನಿರ್ಬಂಧಿಸಿರುವ ರಸ್ತೆಗಳು:
ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬ್ರಾಡ್ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಧರ್ಮರಾಜ ಕೋಯಿಲ್ ಸ್ಪೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗಿದೆ.
ಬಿ.ಆರ್.ವಿ ಜಂಕ್ಷನ್ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್ಗಳು ಸೇರಿದಂತೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬಾಳೇ ಕುಂದ್ರಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್ಗಳು ಸೇರಿದಂತೆ ಎಲ್ಲ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು:
ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿ.ಎಂ.ಟಿ.ಸಿ ಬಸ್ಗಳು ಬಿ.ಆರ್.ವಿ ಜಂಕ್ಷನ್ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ಸ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹುದು.
ದ್ವಿಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ – ಬಲ ತಿರುವು – ಸಫೀನಾ ಪ್ಲಾಜಾ -ಕಮರ್ಷಿಯಲ್ ಸ್ಟ್ರೀಟ್-ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದು.
ದ್ವಿಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಟ್ರೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದು.