ಬೆಂಗಳೂರು: ಕಿತ್ತೂರು ಉತ್ಸವ 2024ರ ಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಿತ್ತೂರು ಉತ್ಸವ ಜ್ಯೋತಿಗೆ ಸಿದ್ದರಾಮಯ್ಯ ಚಾಲನೆ ನೀಡಿದರು.
ಅಕ್ಟೋಬರ್ 23, 24, 25 ರಂದು ಕಿತ್ತೂರಿನಲ್ಲಿ ಉತ್ಸವ ನಡೆಯಲಿದೆ ಅಂತ ಸಿಎಂ ತಿಳಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ, ಕಿತ್ತೂರು ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಎಂದರು.
ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ ಎಂದರು