ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಪೂರ್ವ ನಿಗದಿ ಪ್ರಕಾರ ಇಂದಿಗೆ ಅಂತ್ಯಗೊಳಬೇಕಿತ್ತು. ಆದರೆ ಕೆಲವು ಪ್ರಮುಖ ಮಸೂದೆಗಳ ಮೇಲಿನ ಚರ್ಚೆ,ವಿರೋಧ ಪಕ್ಷಗಳ ಧರಣಿ ಇರುವುದರಿಂದ ಸೋಮವಾರಕ್ಕೆ ಮುಂದೂಡಲಾಗಿದೆ.
ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತಗೆದುಕೊಳ್ಳಲಾಗಿದೆ. ಮಂಗಳವಾರ ರಾಜ್ಯಸಭೆ ಚುನಾವಣೆ ಇರುವ ಕಾರಣ, ಸೋಮವಾರದ ವರೆಗೆ ಮಾತ್ರ ಸದನ ನಡೆಸಲು ತೀರ್ಮಾನ ಮಾಡಲಾಗಿದೆ.
ಕೆಲ ಮಸೂದೆಗಳ ಅಂಗೀಕಾರ ಬಾಕಿ ಹಿನ್ನೆಲೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯವಿರುವುದರಿಂದ ಕಲಾಪದಲ್ಲಿ ಸರಿಯಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ನಾಳೆ ಮತ್ತು ನಾಡಿದ್ದು ವಿಶ್ರಾಂತಿ ತೆಗೆದುಕೊಂಡು ಸೋಮವಾರ ಸದನದಲ್ಲಿ ಕಲಾಪದಲ್ಲಿ ಭಾಗಿಯಾಗಲಿದ್ದಾರೆ.