ಬೆಂಗಳೂರು:- ಸಂವಿಧಾನ ತಿದ್ದುಪಡಿ ಮಾಡಬೇಕೆನ್ನುವ ಅನಂತಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯ ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ.
ಈ ಕುರಿತು ಈ ಹಿಂದೆ ಟ್ವೀಟ್) ಮಾಡಿರುವ ಬಿಜೆಪಿ, ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನದ ಬಗೆಗಿನ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳೇ ಹೊರತು ಪಕ್ಷದ ನಿಲುವನ್ನು ಬಿಂಬಿಸುವುದಿಲ್ಲ, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ. ಬಿಜೆಪಿ ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ಅಚಲವಾದ ಬದ್ಧತೆಯನ್ನು ಹೊಂದಿದೆ. ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಪಕ್ಷವು ಸೂಚಿಸಿದೆ ಎಂದು ತಿಳಿಸಿದೆ.