ಬೆಂಗಳೂರು ;- ರಾಜ್ಯ ಸರ್ಕಾರವು ಸಚಿವ ಶಿವರಾಜ್ ತಂಗಡಗಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಹನ್ನೊಂದು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ದಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ದಿ ನಿಗಮ, ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.