ವಿಧಾನಸಭಾ ಚುನಾವಣೆ ಸೋಲಿನಿಂದ ಯಾರೂ ಧೃತಿಗೆಡಬೇಡಿ, ರಾಜ್ಯದಲ್ಲಿ 2 ಸ್ಥಾನದಿಂದ ಇಲ್ಲಿಯವರೆಗೆ ಪಕ್ಷ ಕಟ್ಟಿ ಬೆಳೆಸಿದ್ದೇನೆ ಎಂದು ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರ ಮಾತ್ರ ಇದ್ದೆವು. ಬಿಜೆಪಿ ಶಾಸಕರಾಗಿದ್ದ ವಸಂತ ಬಂಗೇರ ಪಕ್ಷ ಬಿಟ್ಟು ಹೋದರು.
ಆಗ ನಾನು ಒಬ್ಬನೇ ಸದನದಲ್ಲಿ ನಿಂತು ಹೋರಾಟ ಮಾಡಿದ್ದೇನೆ. ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ, ನರೇಂದ್ರ ಮೋದಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ. ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಕಿವಿಮಾತು ಹೇಳಿದರು.