ಬೆಂಗಳೂರು’:- ಎಂಪಿ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಸ್ಥಾನ ಗೆಲ್ಲುವುದು ನಮ್ಮ ಗುರಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಕೆ ಆರ್ ಪೇಟೆ ನಮ್ಮ ತಂದೆಯವರಿಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಈ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ನಾರಾಯಣ ಗೌಡರು ಗೆಲ್ಲುವುದರ ಮೂಲಕ ದಾಖಲೆಯನ್ನು ನಿರ್ಮಾಣ ಮಾಡಿದ್ದೇವೆ. ಕಳೆದ ಚುನಾವಣೆಯಲ್ಲಿ ಕೆಲವು ಬದಲಾವಣೆಗಳು ಆಗಿವೆ. ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ನಮ್ಮ ಮುಂದೆ ಎರಡು ಗುರಿಗಳಿವೆ, ಒಂದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸುವುದು ಎಂದರು.
ಎರಡಯದಾಗಿ, ಕರ್ನಾಟಕ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಾಗಿ ಪರಿವರ್ತನೆಯಾಗಬೇಕು ಮತ್ತು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದು, ಸ್ಪಷ್ಟ ಬಹುಮತವನ್ನು ಪಡೆಯುವುದಾಗಿದೆ. ಈ ಮೂಲಕ ಬಿಜೆಪಿ ನೇತೃತ್ವದಲ್ಲಿ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.