ಬೆಂಗಳೂರು: ಚುನಾವಣೆ ಪೂರ್ವದಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿದ್ದೇವು. ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕೆಂಬುದು ನಮ್ಮ ಉದ್ದೇಶ. ಚುನಾವಣಾ ಪ್ರಣಾಳಿಕೆಯಲ್ಲಿ ಅನೇಕ ಭರವಸೆ ಕೊಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳು ಪ್ರಮುಖವಾದದ್ದು. ನಾನು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆ ಮನೆಗೆ ಗ್ಯಾರಂಟಿ ವಿತರಿಸಿದ್ದೇವು. ಗ್ಯಾರಂಟಿ ಕಾರ್ಡ್ ಕೊಟ್ಟಿದ್ದನ್ನು ವಿಪಕ್ಷಗಳು ಗೇಲಿ ಮಾಡಿದ್ದರು. ವಿಪಕ್ಷಗಳ ಟೀಕೆಗೆ ನಾವು ವಿಚಲಿತರಾಗಲಿಲ್ಲ. ರಾಜ್ಯದ ಜನರ ಆಶೀರ್ವಾದಿಂದ ನಮಗೆ ಸ್ಪಷ್ಟ ಬಹುಮತ ಸಿಕ್ಕಿತು.
ಮೊದಲ ಕ್ಯಾಬಿನೆಟ್ನಲ್ಲೇ ಗ್ಯಾರಂಟಿಗಳಿಗೆ ಒಪ್ಪಿಗೆ ನೀಡಿದ್ದೆವು ಯಾವ್ಯಾವ ಗ್ಯಾರಂಟಿ ಯಾವ ದಿನ ಜಾರಿ ಎಂದು ಆದೇಶ ಹೊರಡಿಸಿದ್ದೇವೆ. ಅದರಂತೆಯೇ ಇಂದು ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪಾಲ್ಗೊಂಡಾಗ ಮಾತ್ರ ದೇಶ ಅಭಿವೃದ್ದಿ. ಬಡವರ ಜೇಬಿಗೆ ದುಡ್ಡು ಹಾಕುವುದೇ ನಮ್ಮ ಸರ್ಕಾರದ ಉದ್ದೇಶ. 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳು ಮಹಿಳೆಯರಿಗೆ ಸೀಮಿತವಾಗಿದೆ. ಹೆಣ್ಣು ಸಮಾಜದ ಕಣ್ಣು ಇದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.