ದೇವನಹಳ್ಳಿ: ಮುಸ್ಲಿಮರ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಎಂಟಿಬಿ ನಾಗರಾಜ್ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಜಾಮಿಯಾ ಮಸೀದಿ ವತಿಯಿಂದ ಪ್ರತಿಭಟನೆ ಮಾಡಲಾಗಿದೆ.
ಸೋಲಿಗೆ ಮುಸ್ಲಿಂ ಸಮುದಾಯ(Hoskote Muslim community) ಸಹ ಕಾರಣ ಎಂದಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದ ಆತ್ಮಾವಲೋಕನಾ ಸಭೆಯಲ್ಲಿ ಎಂಟಿಬಿ ನಾಗರಾಜ್ ಮಾತನಾಡಿ, ನನ್ನ ಸೋಲಿಗೆ ಮುಸ್ಲಿಂ ಸಮುದಾಯವೇ ಕಾರಣ ಎಂದಿದ್ದರು. ಇದೀಗ ಆ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.