ತಮ್ಮ ಮಾಲೀಕತ್ವದ ಸನ್ರೈಸರ್ಸ್ ಹೈದರಾಬಾದ್ ತಂಡ ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಪಡೆಯಿತು. ಆದರೆ, ತಮ್ಮ ತಂಡ 277 ರನ್ಗಳನ್ನು ಕಲೆ ಹಾಕಿದ ಬೆನ್ನಲ್ಲೆ ಕಾವ್ಯ ಮಾರನ್ ಅವರು ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಿಸಿದರು. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಎಂಟನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡ ತನ್ನ ಪಾಲಿನ 20 ಓವರ್ಗಳಿಗೆ 277 ರನ್ಗಳ ದಾಖಲೆಯ ಮೊತ್ತವನ್ನು ಕಲೆ ಹಾಕಿತ್ತು. ಆ ಮೂಲಕ ಮುಂಬೈ ಇಂಡಿಯನ್ಸ್ಗೆ 278 ರನ್ಗಳ ಕಠಿಣ ಗುರಿಯನ್ನು ನೀಡಿತ್ತು.
ಅಂದ ಹಾಗೆ ಸನ್ರೈಸರ್ಸ್ ಹೈದರಾಬಾದ್ ಬ್ಯಾಟರ್ಗಳು ಒಂದು ಕಡೆ ಬೌಂಡರಿ ಹಾಗೂ ಸಿಕ್ಸರ್ಗಳನ್ನು ಸಿಡಿಸುತ್ಯಿದ್ದರೆ, ಮತ್ತೊಂದು ಕಡೆ ಗ್ಯಾಲರಿಯಲ್ಲಿ ಕುಳಿತಿದ್ದ ಎಸ್ಆರ್ಎಚ್ ತಂಡದ ಒಡತಿ ಕಾವ್ಯ ಮಾರನ್ ಅವರ ಸಂಭ್ರಮ ಅದ್ಭುತವಾಗಿತ್ತು. ಆದರೆ, ಹೈದರಾಬಾದ್ ತಂಡ ಪ್ರಥಮ ಇನಿಂಗ್ಸ್ನಲ್ಲಿ 277 ರನ್ಗಳನ್ನು ಕಲೆ ಹಾಕಿದ ಬಳಿಕ ಕಾವ್ಯ ಮಾರನ್ ಅವರು ಎದ್ದು ನಿಂತು ಕುಣಿದು ಕುಪ್ಪಳಿಸುವ ಮೂಲಕ ವಿಶೇಷವಾಗಿ ಸಂಭ್ರಮಿಸಿದರು. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಎಸ್ಆರ್ಎಚ್ ಅಭಿಮಾನಿಗಳು ಕೂಡ ಈ ವಿಡಿಯೋವನ್ನು ಇಷ್ಟಪಟ್ಟಿದ್ದಾರೆ.