ನವದೆಹಲಿ: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ (Sudha Murty) ಹಾಗೂ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (SL Bhyrappa) ಅವರಿಗೆ ಪದ್ಮ ಭೂಷಣ (Padma Bhushan) ಪ್ರಶಸ್ತಿ ಲಭಿಸಿದೆ.
ಇಲ್ಲಿನ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ (President Of India) ದ್ರೌಪದಿ ಮುರ್ಮು (Droupadi Murmu) ಅವರು ವಿವಿಧ ಕ್ಷೇತ್ರದ ಸಾಧಕರಿಗೆ 2023ನೇ ಸಾಲಿನ ಪದ್ಮಶ್ರೀ, ಪದ್ಮ ವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನ ಪ್ರದಾನ ಮಾಡಿದರುಸಮಾಜ ಸೇವೆ, ಮಹಿಳಾ ಸಬಲೀಕರಣ, ಶಿಕ್ಷಣ, ಕಲೆ ಮತ್ತು ಸಂಸ್ಕೃತಿ, ವನ್ಯಜೀವಿ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ವೇಳೆ ಕೆಜಿಎಫ್-2 ನಟಿ ರವೀನಾ ಟಂಡನ್ಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.