ಪ್ರಯಾಣಿಕರ ಬಸ್ಸೊಂದು ಪರ್ವತ ಪ್ರದೇಶದಿಂದ ಸ್ಕಿಡ್ ಆಗಿ ಕಮರಿಗೆ ಉರುಳಿಬಿದ್ದು ಪರಿಣಾಮ ಕನಿಷ್ಠ 20 ಮಂದಿ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ನಡೆದಿದೆ.
ರಾವಲ್ಪಿಂಡಿಯಿಂದ ಹಂಝಾಕ್ಕೆ ಪ್ರಯಾಣಿಸುತ್ತಿದ್ದ ಬಸ್ನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದು ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದು ಇತರ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.