ಪಾಕಿಸ್ತಾನ: ವಾಯವ್ಯ ಪಾಕಿಸ್ತಾನದಲ್ಲಿ ಬಿರುಗಾಳಿ ಹಾಗೂ ಧಾರಾಕಾರ ಮಳೆಯಿಂದಾಗಿ ಎಂಟು ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಾರ, ಈ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬನ್ನು, ದಿಖಾನ್, ಲಕ್ಕಿ ಮಾರ್ವತ್ ಮತ್ತು ಕರಕ್ ಜಿಲ್ಲೆಗಳಲ್ಲಿ ಒಟ್ಟು 34 ಜನರು ಸಾವಿಗೀಡಾಗಿದ್ದಾರೆ ಎಂದಿದ್ದಾರೆ.
ಮನೆಗಳ ಚಾವಣಿ, ಗೋಡೆಗಳು ಕುಸಿದಿದ್ದು, ಮರಗಳು ಬುಡಸಮೇತ ಬಿದ್ದ ಪರಿಣಾಮ ಸಾವು, ನೋವು ಹೆಚ್ಚಾಗಿದೆ. ಗಾಯಗೊಂಡಿರುವ 110ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 69 ಮನೆಗಳಿಗೆ ಹಾನಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಾಲ್ಕು ಜಿಲ್ಲೆಗಳಲ್ಲೂ ಅಧಿಕಾರಿಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಪಾಕಿಸ್ತಾನದಲ್ಲಿ 1700 ಕ್ಕೂ ಜನರು ಮೃತಪಟ್ಟಿದ್ದರು.