ಟಾಲಿವುಡ್ನ ರೆಬೆಲ್ ಸ್ಟಾರ್ ಪ್ರಭಾಸ್ ಅವರ ಅಧಿಕೃತ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಈ ಬಗ್ಗೆ ತಮ್ಮ ಅಭಿಮಾನಿಗಳಿಗೆ ಇನ್ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾರೆ.
ಸಮಸ್ಯೆಯನ್ನು ಬಗೆಹರಿಸುವಲ್ಲಿ ನನ್ನ ತಂಡ ಮುಂದಾಗಿದೆ. ಶೀಘ್ರವೇ ಪ್ರೊಫೈಲ್ ಮೇಲೆ ನಿಯಂತ್ರಣ ಪಡೆಯಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸದ್ಯ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್ನಲ್ಲಿ ತಯಾರಾಗಿರುವ ಸಲಾರ್ ಚಿತ್ರ ವಿಶ್ವದಾದ್ಯಂತ ಸೆಪ್ಟೆಂಬರ್ 28, 2023 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ವ್ಯಕ್ತವಾಗಿದೆ. ಚಿತ್ರದಲ್ಲಿ ಪ್ರಭಾಸ್ಗೆ ಜೋಡಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದಾರೆ. ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ,