ಬೆಂಗಳೂರು: ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್(Governor Thawar Chand) ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಹಿರಿಯ ಮುಖಂಡ ಡಾ. ಜಿ ಪರಮೇಶ್ವರ್ ಅವರು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರತಿನಿಧಿಯಾಗಿ ಜಿ ಪರಮೇಶ್ವರ್ ರಾಜ್ಯಪಾಲರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ಪತ್ರ ನೀಡಿದ್ದಾರೆ. ಅಲ್ಲದೇ ಮೇ 20 ರಂದು ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಸಲು ಮನವಿ ಸಲ್ಲಿಸಿದ್ದಾರೆ. ಇನ್ನೂ ಇನ್ನೇರಡು ದಿನದಲ್ಲಿ ಕಾಂಗ್ರೆಸ್ನಿಂದ ನೂತನ ರಾಜ್ಯ ಸರ್ಕಾರ ರಚನೆಯಾಗಲಿದ್ದು,
ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಅಂತಿಮವಾಗಿದೆ. ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ 30-30 ಸೂತ್ರದ ಅಡಿಯಲ್ಲಿ ಸಿಎಂ ಆಯ್ಕೆ ಮಾಡಲಾಗಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಅವರು ಸಿಎಂ ಆಗಿ, ನಂತರದ 30 ತಿಂಗಳು ಶಿವಕುಮಾರ್ ಸಿಎಂ ಆಗಿ ಅಡಳಿತವನ್ನು ನಡೆಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಮೇ 20ರಂದು ಸಿಎಂ ಆಗಿ ರಾಜ್ಯವನ್ನು ಮುನ್ನೆಡಸಿಲಿದ್ದಾರೆ.