ಮೈಸೂರು : ಮೈಸೂರಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಿನ್ನೆಲೆ ಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಂದ ಕಾಮಗಾರಿ ಇಂದು ವೀಕ್ಷಣೆ ಮಾಡಿದರು. ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕಾಮಗಾರಿಯ ಸ್ಥಳ ವೀಕ್ಷಿಸಿ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಸುಮಾರು 4 ಎಕರೆ ಪ್ರದೇಶದಲ್ಲಿ ಅಂದಾಜು 82.56 ಕೋಟಿ ರೂಪಾಯಿ,
ಮೊತ್ತದಡಿ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ನಿರ್ಮಾಣವಾಗುತ್ತಿದೆ. ಕಟ್ಟಡ ನಿರ್ಮಾಣ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿ ವೀಕ್ಷಿಸಿದರು. ಸರಸ್ವತಿಪುರಂ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಜಾಗದಲ್ಲಿ ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯ ಕಟ್ಟಡ ತಲೆ ಎತ್ತಲಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.