ಬೆಂಗಳೂರು: ಬಿಜೆಪಿ ಬಳ್ಳಾರಿ ವಿಭಾಗ ಉಸ್ತುವಾರಿ ಸಿದ್ಧೇಶ್ ಯಾದವ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದ್ದ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಂಡಿದ್ದ ಯಾದವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅದರಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.