ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ದರ್ಶನ್ ಅವರು 131 ದಿನಗಳ ಬಳಿಕ ಜೈಲಿನಿಂದ ಹೊರ ಬರುತ್ತಿದ್ದಾರೆ. ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಜರಿಯ ಅವಶ್ಯಕತೆ ಇದೆ. ಇದೇ ಕಾರಣಕ್ಕೆ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನನ್ನು ನೀಡಿದೆ. ಈ ಅವಧಿಯನ್ನು ಅವರು ಕೇವಲ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ.
ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ.
ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್ ಕೋರ್ಟ್ಗೆ ಸಲ್ಲಿಕೆ ಮಾಡಬೇಕಿದೆ.
ಈ ರೀತಿಯ ಪ್ರಕರಣದಲ್ಲಿ ಹೊರ ಬಂದ ಬಳಿಕ ಆರೋಪಿಗಳು ವಿದೇಶಕ್ಕೆ ಹಾರುವ ಸಾಧ್ಯತೆ ಇರುತ್ತದೆ. ಹಾಗಾದಲ್ಲಿ ಅವರನ್ನು ಮರಳಿ ತರೋದು ಕಷ್ಟ. ಹೀಗಾಗಿ ಪಾಸ್ಪೋರ್ಟ್ನ ಕೋರ್ಟ್ಗೆ ಸರೆಂಡರ್ ಮಾಡಬೇಕು ಎಂದು ಕೋರ್ಟ್ ದರ್ಶನ್ಗೆ ಸೂಚನೆ ನೀಡಿದೆ.
ಫ್ಲೈಟ್ ರಿಸ್ಕ್ ಇದೆಯಾ ಎಂದು ಜಡ್ಜ್ ಪ್ರಶ್ನೆ ಮಾಡಿದ್ದರು. ಪಾಸ್ಪೋರ್ಟ್ ವಶಕ್ಕೆ ಪಡೆಯುವ ಷರತ್ತು ವಿಧಿಸಲು ಸರ್ಕಾರಿ ಪರ ವಕೀಲರು ಮನವಿ ಮಾಡಿದ್ದರು. ಈ ಮನವಿ ಹಿನ್ನೆಲೆಯಲ್ಲಿ ಪಾಸ್ಪೋರ್ಟ್ ಸರೆಂಡರ್ ಮಾಡಲು ಆದೇಶ ನೀಡಲಾಗಿದೆ. ಜೊತೆಗೆ ಈ ಸಮಯದಲ್ಲಿ ಯಾವುದೇ ಶೂಟಿಂಗ್ ನಲ್ಲಿ ಭಾಗಿಯಾಗುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ದರ್ಶನ್ ಪರ ವಕೀಲ ಎಂದು ಸುನೀಲ್ , ‘ಮಧ್ಯಂತರ ಜಾಮೀನು ಅಷ್ಟೇ. ರೆಗ್ಯುಲರ್ ಬೇಲ್ ಮೇಲೆ ಅವರನ್ನು ಹೊರಕ್ಕೆ ತರಬೇಕಿದೆ. ಆ ಜವಾಬ್ದಾರಿ ನಮ್ಮ ಮೇಲೆ ಇದೆ’ ಎಂದಿದ್ದಾರೆ.