ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿಯಾಗಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಜೂನ್ 11 ರಂದು ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗಷ್ಟೆ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ವಿಚಾರಣೆ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲವು ವಿಷಯಗಳನ್ನು ಬಿಚ್ಚಿಟ್ಟರು. ಅಲ್ಲದೆ ಪ್ರಕರಣದಲ್ಲಿ ಪವಿತ್ರಾ ಗೌಡರ ಪಾತ್ರವನ್ನು ವಿವರಿಸಿದರು. ಆರೋಪಿ 3, ಪವನ್ ಮೊಬೈಲ್ ಮೂಲಕ ರೇಣುಕಾ ಸ್ವಾಮಿ ಜೊತೆಗೆ ಪವಿತ್ರಾ ಮಾತನಾಡಿದ್ದರು ಎಂಬ ಅಂಶವನ್ನು ನ್ಯಾಯಾಲಯಕ್ಕೆ ಹೇಳಿದ್ದಾರೆ. ಮುಂದುವರೆದು, ಮಹಳೆ ಎಂಬ ಕಾರಣಕ್ಕೆ ಪವಿತ್ರಾ ಗೌಡಗೆ ಜಾಮೀನು ನೀಡಬಾರದು ಎಂದು ಸುಪ್ರೀಂ ಕೋರ್ಟ್ನ ಕೆಲವು ಆದೇಶಗಳನ್ನು ಉದಾಹರಣೆಯಾಗಿ ನೀಡಿದರು.
ಬಳಿಕ ಪವಿತ್ರಾ ಗೌಡ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸೆಬಾಸ್ಟಿಯನ್, ಪವಿತ್ರಾಗೌಡ ಗೂ ದರ್ಶನ್ಗೆ ಒಂದು ರೀತಿಯ ಸಂಬಂಧ ಇರಬಹುದು ನಿಜವಿರಬಹುದು. ಆದರೆ ರೇಣುಕಾ ಸ್ವಾಮಿ ಕೊಲೆಯಲ್ಲ ಪವಿತ್ರಾಗೌಡ ಯಾವುದೇ ಪಾತ್ರ ವಹಿಸಿಲ್ಲ. ರೇಣುಕಾ ಸ್ವಾಮಿ ಇನ್ ಸ್ಟಾಗ್ರಾಮ್ ನಲ್ಲಿ ಅಸಭ್ಯ ಫೋಟೋ ಕಳುಹಿಸಿದ್ದಾನೆ. ಸಹಜವಾಗೇ ಈ ವಿಷಯವನ್ನು ಸಹಾಯಕನಾಗಿರುವ ಎ 3 ಪವನ್ಗೆ ಪವಿತ್ರಾಗೌಡ ತಿಳಿಸಿದ್ದಾಳೆ. ಎ 3 ಪವನ್, ದರ್ಶನ್ ಗೆ ವಿಷಯ ತಿಳಿಸಿದ್ದಾನೆ.