ತೆಲುಗಿನ ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಪ್ರೀತಿ, ಪ್ರೇಮದ ಕುರಿತು ಯಾವ ವಿಷಯವೂ ಇದೀಗ ಗುಟ್ಟಾಗಿ ಉಳಿದಿಲ್ಲ. ಇದೇ ಕಾರಣಕ್ಕೆ ನರೇಶ್ ಎರಡನೇ ಪತ್ನಿ ರಮ್ಯಾ ಹಾಗೂ ನರೇಶ್ ಗೆ ಸಾಕಷ್ಟು ಗಲಾಟೆಗಳು ನಡೆದಿದೆ. ಇದೀಗ ಈ ಸಂಬಂಧದ ಮೇಲೆಯೇ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ ನಿರ್ದೇಶಕ ಎಂ.ಆರ್.ರಾಜು. ಈ ಸಿನಿಮಾಗೆ ಸ್ವತಃ ಪವಿತ್ರಾ ಲೋಕೇಶ್ ಮತ್ತು ನರೇಶ್ ನಾಯಕ ಹಾಗೂ ನಾಯಕಿ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ ಈಗಾಗಲೇ ಸದ್ದಿಲ್ಲದೇ ಸಿನಿಮಾ ಮಾಡಿದ್ದಾರಂತೆ ನಿರ್ದೇಶಕ ರಾಜು. ಬಹುತೇಕ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರಂತೆ. ಹೊಸ ವರ್ಷದ ದಿನದಂದು ನರೇಶ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಪವಿತ್ರಾ ಲೋಕೇಶ್ ಗೆ ಮುತ್ತಿಡುವ ಮೂಲಕ ಮದುವೆ ವಿಚಾರವನ್ನು ಪ್ರಸ್ತಾಪಿಸಿದ್ದರು. ಆ ವಿಡಿಯೋ ಇದೇ ಸಿನಿಮಾದ್ದು ಎಂದು ಹೇಳಲಾಗುತ್ತಿದೆ.
ಈ ಸಿನಿಮಾದಲ್ಲಿ ನರೇಶ್ ಬದುಕು, ಎರಡನೇ ಪತ್ನಿ ರಮ್ಯಾ ಜೊತೆಗಿನ ಮದುವೆ. ಅದಕ್ಕೂ ಮೊದಲಿನ ಮದುವೆ ಹಾಗೂ ಪವಿತ್ರಾ ಲೋಕೇಶ್ ತಮ್ಮ ಬಾಳಿನಲ್ಲಿ ಬಂದದ್ದು ಹೇಗೆ? ಹೀಗೆ ಎಲ್ಲ ಸಂಗತಿಗಳನ್ನು ಚಿತ್ರಕಥೆಯಲ್ಲಿ ಬೆರೆಸಿದ್ದಾರಂತೆ. ಸದ್ಯದಲ್ಲೇ ಈ ಸಿನಿಮಾವನ್ನು ರಿಲೀಸ್ ಮಾಡುವ ಪ್ಲ್ಯಾನ್ ಕೂಡ ಹೊಂದಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.