ಬೆಂಗಳೂರು: ಜನವರಿ 16ರಿಂದ ನಾಲ್ಕು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ ಕಾರಣವೇನೇಂದರೆ ಲೋಡ್ ಟೆಸ್ಟಿಂಗ್ ಮಾಡುವ ಸಲುವಾಗಿ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ ಹಾಗೆ ಎಲ್ಲಾ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
15 ಮೀಟರ್ ಅಗಲದ, 4.2 ಕಿಮೀ ಉದ್ದದ ಮೇಲ್ಸೇತುವೆ ಪೀಣ್ಯದಲ್ಲಿ ಪ್ರಾರಂಭವಾಗಿ ತುಮಕೂರು ರಸ್ತೆಯ ನಾಗಸಂದ್ರದಲ್ಲಿ ಕೊನೆಗೊಳ್ಳುತ್ತದೆ. 2022ರಲ್ಲಿ ಪೀಣ್ಯ ಫ್ಲೈಓವರ್ನ ಎರಡು ಪಿಲ್ಲರ್ನ ಕೇಬಲ್ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಹೆವಿ ವೆಹಿಕಲ್ಗಳ ಓಡಾಟಕ್ಕೆ ಬ್ರೇಕ್ ಹಾಕಲಾಗಿತ್ತು.
ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಈ ಫ್ಲೈಓವರ್ ಕ್ಲೋಸ್ ಆಗಲಿದೆ. ಈ ಹಿನ್ನೆಲೆ ಎಲ್ಲಾ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ಬೃಹತ್ ವಾಹನ ದಟ್ಟಣೆ ಉಂಟಾಗಲಿದೆ ಎಂದು ವರದಿಗಳು ತಿಳಿಸಿವೆ.
ಈ ಫ್ಲೈಓವರ್ 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವುದಲ್ಲದೇ ಬೆಂಗಳೂರು ಮತ್ತು ರಾಜ್ಯದ ಇತರೆ ಜಿಲ್ಲೆಗಳಿಗೆ ಒಂದು ರೀತಿಯ ಆರ್ಥಿಕ ಚೇತರಿಕೆಯ ಕೊಂಡಿ ಆಗಿದೆ. ಪೀಣ್ಯ ಮೇಲ್ಸೇತುವೆ ಒಟ್ಟು 120 ಪಿಲ್ಲರ್ಗಳನ್ನು ಒಳಗೊಂಡಿದೆ.