ಬೆಂಗಳೂರು: ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಆದಾಯ ತೆರಿಗೆ ಹಾಗೂ ಇತರ ಸಂಸ್ಥೆತಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಬೆಂಬಲಿಗರನ್ನು ಬೆದರಿಸುವ ಯತ್ನ ಮಾಡುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ. ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ,
ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡುತ್ತೇವೆ. ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದು, ರಾಜ್ಯದಲ್ಲಿ ಬದಲಾವಣೆ ತರಲಿದ್ದಾರೆ. ಮೇ 10ರಂದು ಕೇವಲ ಮತದಾನದ ದಿನ ಮಾತ್ರವಲ್ಲ, ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟಾಚಾರ ಬಡಿದೋಡಿಸುವ ದಿನ. ಎಲ್ಲರ ಮನೆಯಲ್ಲಿ ಜ್ಯೋತಿ ಹತ್ತಿಸುವ, ಎಲ್ಲಾ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ದಿನ. ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ 141ರಿಂದ 150 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಮೊದಲ ಸಂಪುಟದಲ್ಲೇ ನಾವು ನಮ್ಮ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.