ಮೈಸೂರು: ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಇದು ಜನಾಕ್ರೋಶಕ್ಕೆ ಕಾರಣವಾಗಲಿದೆ ಎಂದ ಮೈಸೂರಿನಲ್ಲಿ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರ ಜನರನ್ನು ಗೊಂದಲ ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಗ್ಯಾರಂಟಿ ಜಾರಿ ಎಂದಿದ್ದರು. ಅಧಿಕಾರಕ್ಕೆ ಬಂದು 20 ದಿನವಾದ್ರೂ ಗ್ಯಾರಂಟಿ ಜಾರಿ ಮಾಡಲು ಆಗಿಲ್ಲ. ಜನರಿಗೆ ತೆರಿಗೆ ಕಟ್ಟದಂತೆ ಪರೋಕ್ಷವಾಗಿ ಪ್ರೇರಣೆ ನೀಡಲಾಗುತ್ತಿದೆ ಎಂದರು.