ನವದೆಹಲಿ ;- ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಯನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ..
ಭಾನುವಾರ ಎನ್ಸಿಪಿ ನಾಯಕ ಅಜಿತ್ ಪವಾರ್ ವಿಪಕ್ಷನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಅಲ್ಲದೆ ಅವರು ಉಪಮುಖ್ಯಮಂತ್ರಿಯಾಗಿ ಹಾಗೂ ಇತರ 8 ಎನ್ಸಿಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ವೈ, ಇದು ತುಂಬಾ ಒಳ್ಳೆಯ ಬೆಳವಣಿಗೆ. ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆಯನ್ನು ನಾನು ಸ್ವಾಗತಿಸುತ್ತೇನೆ. ಎನ್ಸಿಪಿ ನಾಯಕರ ಈ ನಿರ್ಧಾರದಿಂದ ನಾನು ಮತ್ತು ಮಹಾರಾಷ್ಟ್ರದ ಜನತೆ ಕೂಡ ಖುಷಿಯಾಗಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.