ಮಡಿಕೇರಿ: ರಾಜ್ಯದ ಜನ ಕಾಂಗ್ರೆಸ್ ನಾಯಕರ ಮುಖ ನೋಡಿ ಮತ ಹಾಕಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ನೋಡಿ ಮತಹಾಕಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ(Pratap Simha) ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಜನರಿಗೆ ನೀಡಿದ ಗ್ಯಾರಂಟಿ ಭರವಸೆ ಈಡೇರಿಸಲಿ. ಗ್ಯಾರಂಟಿ ಘೋಷಿಸುವಾಗ ಯಾವುದೇ ಷರತ್ತು ವಿಧಿಸಿರಲಿಲ್ಲ. ಗ್ಯಾರಂಟಿ ಜಾರಿ ಸಂದರ್ಭದಲ್ಲೂ ಯಾವುದೇ ಷರತ್ತು ವಿಧಿಸಬಾರದು ಎಂದು ಆಗ್ರಹಿಸಿದ್ದಾರೆ.
ಗ್ಯಾರಂಟಿ ಜಾರಿಗೆ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ, ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದ ಬಳಿಕ ಘೋಷಣೆ ಮಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.