ಹುಬ್ಬಳ್ಳಿ: ಶ್ರಾವಣ ಮಾಸದ ಶುಕ್ರವಾರ ಶ್ರೀ ವರ ಮಹಾ ಲಕ್ಷ್ಮೀ ಪೂಜೆಗೆ ಆಚರಣೆ ಬಲು ತಯಾರಿ ನಡೆದಿದ್ದು ಈ
ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಹಬ್ಬದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿ ಧಾರವಾಡ ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲಾಧ್ಯಂತ ಜನಜಂಗುಳಿ ಕಂಡುಬಂತು.
ಹುಬ್ಬಳ್ಳಿ ನವನಗರದ ಎಪಿಎಂಸಿ ಮಾರುಕಟ್ಟೆ, ಗಾಂಧಿ ಮಾರುಕಟ್ಟೆ, ಹಳೇ ಹುಬ್ಬಳ್ಳಿ ಮಾರುಕಟ್ಟೆ, ಬೆಂಗೇರಿ ಸೇರಿದಂತೆ ಇತರೆ ಮಾರುಕಟ್ಟೆಯಲ್ಲಿ ಬೆಳಿಗ್ಗೆಯಿಂದಲೇ ಜನರು ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿ ಖರೀದಿಸುತ್ತಿದ್ದರು.
ಕಳೆದ ವಾರ 90 ರೂಪಾಯಿಗೆ ಸಿಗುತ್ತಿದ್ದ ಹೂವಿನ ಬೆಲೆ ಈಗ 300 ರಿಂದ 350 ರೂಪಾಯಿ ಹೆಚ್ಚಾಗಿದೆ. ಅದರಲ್ಲೂ ಸೇವಂತಿಗೆ, ಮಲ್ಲಿಗೆ ಹೂವಿನ ಬೆಲೆ ಗಗನಕ್ಕೇರಿದೆ.
ಸೇಬು ದರ ಕೆಜಿಗೆ 250 -300 ರೂಪಾಯಿ, ಪಚ್ಚಬಾಳೆ ಕೆಜಿಗೆ 50-80 ಏಲಕ್ಕಿ ಬಾಳೆಹಣ್ಣು ಕೆಜಿಗೆ 150-200 ಕಿತ್ತಾಳೆ ಕೆಜಿಗೆ 180 200, ಮೂಸಂಬಿ ಕೆಜಿಗೆ 90-130 ರೂ.ಗೆ ಮಾರಾಟವಾಗುತ್ತಿದೆ. ಈ ಕುರಿತು ಹುಬ್ಬಳ್ಳಿ ಮಹಾತ್ಮ ಗಾಂಧಿ ಮಾರುಕಟ್ಟೆಯಲ್ಲಿ ಗ್ರಾಹಕರು ಸಹ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಹುಬ್ಬಳ್ಳಿ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿ ಮಹೇಶ್ ಹಂಜಿ ಪ್ರತಿಕ್ರಿಯೆ ಕೊಟ್ಟಿದ್ದು ಹಣ್ಣಿ ದರ ಹೆಚ್ಚಾಗಿದೆ. ಗ್ರಾಹಕರಿಗೆ ಸ್ವಲ್ಪ ಹೊರೆಯೆನಿಸಿದರೂ, ಹಬ್ಬದ ನೆಪದಲ್ಲಿ ಖರೀದಿಸುತ್ತಾರೆ. ವಿವಿಧ ಕಾರಣಗಳಿಗಾಗಿ ವರ್ಷದ ಬೇರೆ ಸಂದರ್ಭದಲ್ಲಿ ಕೈ ಸುಟ್ಟುಕೊಳ್ಳುವ ರೈತರಿಗೆ ಹಬ್ಬದ ನೆಪದಲ್ಲಿ ಒಂದಿಷ್ಟು ಲಾಭವಾಗುತ್ತದೆ. ಆದರೆ, ಗ್ರಾಹಕರು ಹೂವು, ಹಣ್ಣುಗಳನ್ನು ಕಡಿಮೆ ದರದಲ್ಲಿ ಕೇಳುತ್ತಾರೆ.
ಎಪಿಎಂಸಿಯಲ್ಲಿ ಹೆಚ್ಚು ಹಣ ಕೊಟ್ಟು ತಂದಿರುತ್ತೇವೆ ಎನ್ನುತ್ತಾರೆ. ಇನ್ನು ಹೂ ವ್ಯಾಪಾರಿಗಳು ಸಹ ಮಾತನಾಡಿ,ಮಾರು ಹೂವುಗೆ ಒಂದಕ್ಕೆ ಎರಡು ಪಟ್ಟು ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಇವತ್ತು, ನಾಳೆ ಹಬ್ಬ ಇರುವುದಿಂದ ಗ್ರಾಹಕರು ಹೆಚ್ಚಾಗಿ ಆಗಮಿಸುತ್ತಿದ್ದಾರೆ” ಎಂದರು.
ಇದರ ಜೊತೆಗೆ ಸಾರ್ವಜನಿಕರು ಸಹ ಆತಂಕ ವ್ಯಕ್ತಪಡಿಸಿದ್ದು
ಪ್ರತಿ ಬಾರಿಯಂತೆ ಈ ಬಾರಿಯೂ ಹಬ್ಬದ ಅಂಗವಾಗಿ ಹೂವು, ಹಣ್ಣಿನ ದರ ಗಗನಕ್ಕೇರಿದೆ. ಪ್ರತಿ ಸಲವೂ ಇದು ಮಾಮೂಲಿ. ಆದರೂ, ಹಬ್ಬಕ್ಕೆ ಎಷ್ಟು ಬೇಕೋ ಅಷ್ಟನ್ನು ಖರೀದಿಸಲೇಬೇಕು. ದರ ಏರಿಕೆಯಾಗಿದೆ ಎಂದರು.