ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಹತ್ತಾರು ಶೂಗಳು ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅಪಾರ್ಟ್ಮೆಂಟ್ ಗೆ ಲಗ್ಗೆ ಇಡುವ ಕಳ್ಳರು, ಬ್ಯಾಗ್ ಗಳಲ್ಲಿ ಬಟ್ಟೆಗಳನ್ನ ತಂದು ಶೂಗಳನ್ನ ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅದರ ಭಾಗವಾಗಿ ನಗರದ ಹೆಚ್ ಎಸ್ ಆರ್ ಲೇಔಟ್ ನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ಜರುಗಿದ್ದು, ದುಬಾರಿ ಶೂಗಳನ್ನೆ ಕಳ್ಳರು ಕದ್ದು ಎಸ್ಕೆಎಫ್ ಆಗಿದ್ದಾರೆ.
ಈ ಹಿನ್ನೆಲೆ ಸ್ಥಳೀಯ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ಅಪಾರ್ಟ್ಮೆಂಟ್ ನಿವಾಸಿಗಳು ದೂರು ನೀಡಿದ್ದು, ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.