ಬೆಂಗಳೂರು-ಮೈಸೂರು ಹೈವೇಯಲ್ಲಿ 2ನೇ ಹಂತದ ಟೋಲ್ ಸಂಗ್ರಹಕ್ಕೆ ಸಂಬಂಧಿಸಿ ಬೆಳಗ್ಗೆ 8ರಿಂದ ಗಣಂಗೂರು ಟೋಲ್ನಲ್ಲಿ ಶುಲ್ಕ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ.
ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಶುಲ್ಕ ವಸೂಲಿಗೆ ಸಿದ್ಧತೆ ನಡೆದಿದ್ದು NHAI ನಡೆ ವಿರುದ್ಧ ಮಂಡ್ಯ ಶಾಸಕರು, ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಟೋಲ್ ಸಂಗ್ರಹ ಇಂದಿನಿಂದ ಶುರುವಾಗಿದೆ. ಮಂಡ್ಯ ಜಿಲ್ಲೆಯ 55 ಕಿಮೀ ವ್ಯಾಪ್ತಿಯಲ್ಲಿ ಟೋಲ್ ಕಲೆಕ್ಷನ್ ಮಾಡಲಾಗ್ತಿದೆ. ಜೀಪು ಕಾರು ಸೇರಿದಂತೆ ಲಘು ವಾಹನಗಳಿಗೆ 80 ರೂಪಾಯಿ ಕಟ್ಟಬೇಕಿದೆ.