ಮುರಿಯೆಟಾ: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಸಿಂಗಲ್ ಇಂಜಿನ್ ವಿಮಾನವೊಂದು ಪತನಗೊಂಡಿದ್ದು ಘಟನೆಯಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ಜನರಿದ್ದ ಸೆಸ್ನಾ 172 ವಿಮಾನವು ಮುರ್ರಿಯೆಟಾದ ಫ್ರೆಂಚ್ ವ್ಯಾಲಿ ವಿಮಾನ ನಿಲ್ದಾಣದಿಂದ ಮಂಗಳವಾರ ಮಧ್ಯಾಹ್ನ 2:45 ರ ಸುಮಾರಿಗೆ ಟೇಕ್ ಆಫ್ ಆಗಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ತಿಳಿಸಿದೆ.
ದೂರದರ್ಶನದ ಸುದ್ದಿ ದೃಶ್ಯಾವಳಿಗಳು ವ್ಯಾಪಾರದ ಪಾರ್ಕಿಂಗ್ ಸ್ಥಳದಲ್ಲಿ ಸಣ್ಣ ವಿಮಾನವನ್ನು ತಲೆಕೆಳಗಾಗಿ ಬಿದ್ದಿರುವುದನ್ನು ತೋರಿಸಿವೆ.
ರಿವರ್ಸೈಡ್ ಕೌಂಟಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಡೌನ್ಟೌನ್ ಲಾಸ್ ಏಂಜಲೀಸ್ನ ಆಗ್ನೇಯಕ್ಕೆ ಸುಮಾರು 85 ಮೈಲಿಗಳು (135 ಕಿಲೋಮೀಟರ್) ಸ್ಥಳದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದೆ.