ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.
ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.