ನವದೆಹಲಿ:- ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಮಾಡಿದ್ದಾರೆ. ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಗಣಪತಿಯನ್ನು ಕೂಡ ಕಂಬಿ ಹಿಂದೆ ಹಾಕಲಾಗಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಮೀಸಲಾತಿ ವಿರೋಧಿಯಾಗಿದೆ. ಕಾಂಗ್ರೆಸ್ ದಿನಕ್ಕೊಂದು ಹೊಸ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳಲು ಕಾಂಗ್ರೆಸ್ಗೆ ನಾಚಿಕೆ ಆಗುವುದಿಲ್ಲವೇ? ದೇಶದ ಏಕತೆ ಮೇಲೆ ಕಾಂಗ್ರೆಸ್ನಿಂದ ನಿರಂತರ ದಾಳಿ ನಡೆಯುತ್ತಿದೆ. ಕೇವಲ ಬಿಜೆಪಿಗೆ ಮಾನಹಾನಿ ಮಾಡುವ ಉದ್ದೇಶದಿಂದ ದೇಶದ ಮಾನಹಾನಿ ಮಾಡಲು ನಾಚಿಕೆಯಾಗುವುದಿಲ್ವಾ? ಇದು ಹಳೆಯ ಕಾಂಗ್ರೆಸ್ ಅಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಈಗ ಮೊದಲಿನ ಕಾಂಗ್ರೆಸ್ ಆಗಿ ಉಳಿದಿಲ್ಲ. ಇಂದಿನ ಕಾಂಗ್ರೆಸ್ ನಗರ ನಕ್ಸಲ್ನ ಹೊಸ ರೂಪವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ದೇಶವೇ ಇಂದು ಗಣೇಶ ಉತ್ಸವವನ್ನು ಆಚರಿಸುತ್ತಿದೆ. ಅದಕ್ಕೆ ಕಾಂಗ್ರೆಸ್ ಅಡ್ಡಿಯಾಗುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ