ನವದೆಹಲಿ:- ಸೋನಿಯಾ ಗಾಂಧಿ ಜನ್ಮದಿನ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ಎಕ್ಸ್ನಲ್ಲಿ ಶುಭಾಶಯ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಮತಿ ಸೋನಿಯಾ ಗಾಂಧಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.
ಸುದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣಗಳಿಗಾಗಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದಾರೆ. ಅವರ ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.