ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ದಂತೆ BSY ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲರಿಗೆ ದೂರು ನೀಡಿಲಾಗಿದೆ. ಹೌದು ಸಂತ್ರಸ್ತ ಬಾಲಕಿ ತಾಯಿ ಮತ್ತು ಜನತಾ ಪಾರ್ಟಿ- ಕರ್ನಾಟಕ ವತಿಯಿಂದ ದೂರು ನೀಡಿಲಾಗಿದ್ದು,
ಪೋಕ್ಸೋ ಕಾನೂನಿನ ಅನ್ವಯ ಯಡಿಯೂರಪ್ಪ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಂತ್ರಸ್ತ ಬಾಲಕಿ ತಾಯಿ ಮತ್ತು ಜನತಾ ಪಾರ್ಟಿ ಸದಸ್ಯರು ದೂರು ನೀಡಲು ರಾಜಭವನಕ್ಕೆ ತೆರಳಿ BSY ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿದರು.
ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ್ದರು. ಈ ಘಟನೆ ಸಂಬಂಧ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.