ಬೆಂಗಳೂರು: ಶಾಲಾ ಮಕ್ಕಳಲ್ಲಿ ಡ್ರಗ್ ಬಗ್ಗೆ ಜಾಗೃತಿ ಮೂಡಿಸುವ ತಂತ್ರಕ್ಕೆ ಮುಂದಾಗಿದ್ದಾರೆ. ಡ್ರಗ್ಸ್ ಸೇವನೆ, ಅದರಿಂದಾಗುವ ದುಷ್ಪರಿಣಾಮ ಹಾಗೂ ಆರೋಗ್ಯದಲ್ಲಾಗುವ ನಷ್ಟ, ಡ್ರಗ್ಸ್ನಿಂದ ಆಗುವ ಅನಾಹುತಗಳ ಬಗ್ಗೆ ಶಿಕ್ಷಕರಿಂದಲೇ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪಠ್ಯದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಸೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ.
ಮತ್ತೊಂದೆಡೆ ಪೊಲೀಸರು ಡ್ರಗ್ಸ್ ಸಂಬಂಧ ಹಲವು ಕಾರ್ಯಾಚರಣೆ ನಡೆಸುತ್ತಿದ್ದು ಯುವಕರು ಹೆಚ್ಚಾಗಿ ಮಾದಕ ಲೋಕಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಪತ್ತೆಯಾಗಿದೆ. ಯುವಜನತೆ ಹೆಚ್ಚು ಮಾದಕ ವ್ಯಸನಿಗಳಾಗುತಿದ್ದಾರೆ. ಕಾಲೇಜು ಹಂತದಲ್ಲಿರುವ ಮಕ್ಕಳೇ ಹೆಚ್ಚು ಮಾದಕ ದುಷ್ಚಟಕ್ಕೆ ಬಲಿಯಾಗುತಿದ್ದಾರೆ. ಹೀಗಾಗಿ ಶಾಲಾ ಹಂತದಲ್ಲೇ ಮಕ್ಕಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದು ಪ್ರಯತ್ನದ ಹಂತವಾಗಿ ಬೆಂಗಳೂರು ಪೊಲೀಸ್ ಕಮಿಷನರ್, ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಿದ್ದಾರೆ.