ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ ಜಗತ್ತಿನ ಅತಿದೊಡ್ಡ ಲೈಂಗಿಕ ಹಗರಣ ಆಗಿದೆ. ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದ ಕುಮಾರಸ್ವಾಮಿ, ಈಗ ಯಾರು ತಪ್ಪಿದ್ದಾರೆ ಎಂಬುದನ್ನು ಹೇಳಲಿ ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಲವು ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚ್ಯಾರ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಬಗ್ಗೆ ದೇವೇಗೌಡರ ಕುಟುಂಬದವರು ಉತ್ತರ ಕೊಡಬೇಕು. ಎಸ್ಐಟಿ ತನಿಖೆಯಿಂದ ಸತ್ಯಾಂಶ ಹೊರಗೆ ಬಂದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು,” ಎಂದರು.
”ವಿಶ್ವಗುರು ಎಂದು ಹೇಳಿಕೊಳ್ಳುವ ಪ್ರಧಾನಿ ಮೋದಿ ಅವರು ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಪತ್ತೆ ಮಾಡಲಿ. ಸಿಬಿಐ, ಇಡಿ, ಐಟಿ ಇವೆಲ್ಲಾಇರುವುದು ಮಾಂಗಲ್ಯ ಕಿತ್ತವರನ್ನು ರಕ್ಷಣೆ ಮಾಡಲು ಅಲ್ಲ. ಈ ಬಗ್ಗೆ ಈವರೆಗೆ ತುಟಿಬಿಚ್ಚದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು” ಎಂದು ಕಿಡಿಕಾರಿದರು.