2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಂದ ಬಾರಿ ಮತದಾನವಾಗಿದೆ. ಬೆಂಗಳೂರು ನಗರ ಪ್ರದೇಶದಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮತದಾನ ಮಾಡಲಾಗಿದೆ.
ನಗರದಲ್ಲಿ 85 ವರ್ಷ ಮೇಲ್ಪಟ್ಟ ಒಟ್ಟು 1,13,108 ಹಿರಿಯ ನಾಗರಿಕರ ಪೈಕಿ 7,556 ಹಿರಿಯರು ಮಾತ್ರ ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು. ಅದೇ ರೀತಿಯಾಗಿ 30,693 ಅಂಗವಿಕಲರ ಪೈಕಿ 302 ಮಂದಿ ಮಾತ್ರ ಮನೆಯಿಂದ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿದ್ದರು. ಇದರಿಂದ ಒಟ್ಟು ನೋಂದಾಯಿತ ಮನೆ ಮತದಾರರ ಸಂಖ್ಯೆ 7,858ಕ್ಕೆ ಏರಿಕೆ ಆಗಿತ್ತು
ಲೋಕಸಭೆ ಚುನಾವಣೆಗೆ ಕರ್ನಾಟಕದ 28 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7 ರಂದು (ಎರಡನೇ ಮತ್ತು ಮೂರನೇ ಹಂತ) ಮತದಾನ ನಡೆಯಲಿದೆ.
ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ನಡೆದಿದೆ.